ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್...!

 
ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್...!

ಚಾಮರಾಜನಗರ: ನಗರದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತುಮಕೂರು ಮೂಲದ ಕಿರಿಯ ವಿದ್ಯಾರ್ಥಿಯೊಬ್ಬನಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದು, ನೊಂದ ವಿದ್ಯಾರ್ಥಿಯ ಪೋಷಕರು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಟ್ಟೆ ಬಿಚ್ಚಿಸುವುದು, ತಾವು ಹೇಳಿದಂತೆ ಡ್ಯಾನ್ಸ್ ಮಾಡಿಸುವುದು, ಅಶ್ಲೀಲವಾಗಿ ಸೌಂಡ್ ಮಾಡುವುದು, ಕುರ್ಚಿಯಲ್ಲಿ ಕೂರುವಂತೆ ಕೂರಿಸುವುದು, ಕೆನ್ನೆಗೆ ಹೊಡೆಯುವುದು ಈ ರೀತಿಯಾಗಿ ಹಿರಿಯ‌ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡುತ್ತಿದ್ದಾರೆ ಎಂದು ನೊಂದ ವಿದ್ಯಾರ್ಥಿ ಪಾಲಕರ ಬಳಿ ಅಳಲು ತೋಡಿಕೊಂಡಿದ್ದಾನೆ.

ದೂರಿನ ಹಿನ್ನಲೆಯಲ್ಲಿ ಪೊಲೀಸರು ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌. ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಬಿಟ್ಟು ಕಳುಹಿಸಿದ್ದಾರೆ.

ಪೊಲೀಸರು ವಿದ್ಯಾರ್ಥಿಗಳನ್ನು ಯಾಕೆ ಕರೆದೊಯ್ದರು ಎಂಬುದು ಗೊತ್ತಿಲ್ಲ. ರ್ಯಾಗಿಂಗ್ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಯಾವುದೇ ದೂರು ಬಂದಿಲ್ಲ ಎಂದು ಕಾಲೇಜಿನ ಡೀನ್ ಡಾ.ಸಂಜೀವ್ ಹೇಳಿದ್ದಾರೆ‌.

ಇನ್ನೊಂದೆಡೆ ಕಿರಿಯ ವಿದ್ಯಾರ್ಥಿಯ ಪಾಲಕರು ಹಾಗೂ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳನ್ನು ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಕರೆಸಿ ಸಂಧಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

From Around the web