ರಮೇಶ್ ಜಾರಕಿಹೊಳಿಯನ್ನು ಬಂಧನ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

 
ರಮೇಶ್ ಜಾರಕಿಹೊಳಿಯನ್ನು ಬಂಧನ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಆನೇಕಲ್: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಾದ್ರು ಬಂಧನ ಮಾಡದೆ ವಿಳಂಬ ಮಾಡುತ್ತಿದ್ದು, ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡುತ್ತಿರುವ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧನ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು ಹೊರವಲಯ ಜಿಗಣಿ ಎಪಿಎಸ್ ಸರ್ಕಲ್ ನಿಂದ ಪೋಲಿಸ್ ಠಾಣೆಯ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ನೂರಾರು ಜನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿ ಕೇಸ್ ಆದ್ರು ಸಹ ಬಂಧನವಾಗಿಲ್ಲ. ಪ್ರಕರಣದಲ್ಲಿ ನೊಂದ ಸಂತ್ರಸ್ತ ಯುವತಿ ವಿಡಿಯೋ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ನೇರ ಆರೋಪ ಮಾಡುತ್ತಿದ್ದರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಬಿಜೆಪಿ ಸರ್ಕಾರ ರಮೇಶ್ ಜಾರಕಿಹೊಳಿ ಪರ ನಿಂತು ಯುವತಿಯ ಪತ್ತೆಯನ್ನು ಸಹ ಮಾಡಲು ಸಾಧ್ಯವಾಗಿಲ್ಲ. ಜೊತೆಗೆ ಅವರ ಪೋಷಕರಿಗೂ ಭದ್ರತೆ ನೀಡದೆ ಎಸ್ಐಟಿ ಹಾಗೂ ಪೋಲಿಸರ ಮೂಲಕ ಅವರಿಗೆ ಒತ್ತಡ ಹೇರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರನ್ನು ಈ ಪ್ರಕರಣದಲ್ಲಿ ತಂದು ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದು ಸರಿಯಲ್ಲಿ ಕೂಡಲೇ ಡಿಕೆ ಶಿವಕುಮಾರ್ ಅವರ ಬಳಿ ರಮೇಶ್ ಜಾರಕಿಹೊಳಿ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಮುಖಂಡರಾದ ಆರ್.ಕೆ. ರಮೇಶ್ ಒತ್ತಾಯಿಸಿದರು.

ಬಳಿಕ ಮಾತನಾಡಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ದೀಪಿಕಾ ರಾಜಗೋಪಾಲ್ ರೆಡ್ಡಿ ಮಾತನಾಡಿ ಇವತ್ತಿಗೆ ಕೆಲಸ ಕೊಡಿಸುವ ಭರವಸೆ ನೀಡಿ ಅವರನ್ನು ಲೈಂಗಿಕವಾಗಿ ಬಳಸಿಕೊಂಡು ಇಡೀ ರಾಷ್ಟ್ರದ ಅತ್ಯಂತ ಕರ್ನಾಟಕದ ಮಾನ ಮರ್ಯಾದೆಯನ್ನು ಹರಾಜು ಹಾಕುವ ಮೂಲಕ ಎಲ್ಲರಿಂದಲೂ ಛೀಮಾರಿ ಹಾಕಿಸಿಕೊಂಡರು ಕೂಡ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರುದ್ಧವಾಗಿ ರಮೇಶ್ ಜಾರಕಿಹೊಳಿ ಮಾತನಾಡುತ್ತಿದ್ದು, ಡಿಕೆ ಶಿವಕುಮಾರ್ ಅವರಿಗೆ ರಾಜ್ಯ ಸೇರಿದಂತೆ ದೇಶದಾದ್ಯಂತ ಅಭಿಮಾನಿಗಳ ಬಳಗ ಇದ್ದು ಇನ್ನು ಮುಂದೆ ಇದೇ ರೀತಿ ಮಾತನಾಡಿದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

From Around the web