ಕೊರೋನಾ ಎರಡನೇ ಅಲೆ ಹೆಚ್ಚಾದ್ರು ಇಲ್ಲ ಲಾಕ್ ಡೌನ್: ಜಾತ್ರೆ, ಧರಣಿಗಳಿಗೆ ಮಾತ್ರ ಬ್ರೇಕ್

 
ಕೊರೋನಾ ಎರಡನೇ ಅಲೆ ಹೆಚ್ಚಾದ್ರು ಇಲ್ಲ ಲಾಕ್ ಡೌನ್: ಜಾತ್ರೆ, ಧರಣಿಗಳಿಗೆ ಮಾತ್ರ ಬ್ರೇಕ್

ಬೆಂಗಳೂರು: ಕೊರೋನಾ ಎರಡನೇ ಅಲೆ ದೇಶದಲ್ಲಿ ಆರಂಭವಾಗಿದ್ದು, ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಇನ್ನು ಕರ್ನಾಟಕದಲ್ಲಿ ದಿನ ದಿನಕ್ಕೂ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿಎಂ ಯಡಿಯೂರಪ್ಪ ಲಾಕ್ ಡೌನ್ ಸಧ್ಯಕ್ಕಿಲ್ಲ ಎಂದಿದ್ದಾರೆ.

ಕೊರೋನಾ ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಹು ಮುಖ್ಯವಾಗಿ ಅಪಾರ್ಟ್ ಮೆಂಟ್ ಗಳಲ್ಲಿ ಸೋಂಕು ಹೆಚ್ಚಾಗಿ ಹರಡುತ್ತಿದೆ. ಈ ಬಗ್ಗೆ ಸಭೆ ನಡೆಸಿದ ಸಿಎಂ, ಸಧ್ಯಕ್ಕೆ ಲಾಕ್ ಡೌನ್ ಇಲ್ಲ. ಆದರೆ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹದಂತಹ ಗುಂಪು ಸೇರುವ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ, ಸ್ವಿಮ್ಮಿಗ್ ಪೂಲ್ ಬಳಸುವಂತಿಲ್ಲ ಎಂದು ಹೇಳಿದ್ದಾರೆ.

ಇಂದಿನಿಂದ 15 ದಿನ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇಲ್ಲ. ಲಾಕ್ ಡೌನ್ ಬದಲಿಗೆ ರಾಜ್ಯದಲ್ಲಿ ಕೋವಿಡ್ ನಿರ್ಬಂಧಿಸಲು ಒಂದಷ್ಟು ಕಠಿಣ ನಿಯಮಗಳು ಜಾರಿಗೆ ತರಲಾಗುತ್ತಿದೆ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು. ಅಪಾರ್ಟ್ ಮೆಂಟ್ ಗಳಲ್ಲಿ ಪಾರ್ಟಿ, ಜಿಮ್ ಮತ್ತು ಈಜುಕೋಳಗಳನ್ನು ನಿಷೇಧಿಲಾಗಿದೆ ಎಂದು ಸಿಎಂ ಹೇಳಿದರು.

ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದಾರೆ.

From Around the web