ಕೊರೋನಾ ಅಬ್ಬರ: ಒಂದೇ ದಿನದಲ್ಲಿ 59,118 ಮಂದಿಗೆ ಸೋಂಕು

 
ಕೊರೋನಾ ಅಬ್ಬರ: ಒಂದೇ ದಿನದಲ್ಲಿ 59,118 ಮಂದಿಗೆ ಸೋಂಕು

ಬೆಂಗಳೂರು: ದೇಶದಲ್ಲಿ ಕೋವಿಡ್  19 ಎರಡನೇ ಅಲೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 59,118 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 154 ದಿನಗಳ ಬಳಿಕ ಅಂದರೆ ಕಳೆದ 5 ತಿಂಗಳ ಅವಧಿಯಲ್ಲೇ ಒಂದೇ ದಿನ ಇಷ್ಟೊಂದು ಮಂದಿಯಲ್ಲಿ ಸೋಂಕು ಕಾಣಸಿಕೊಳ್ಳುತ್ತಿರುವುದು ಇದೇ ಮೊದಲಾಗಿದೆ. 

ಮತ್ತೊಂದೆಡೆ ಕೊರೋನಾ ಸೋಂಕಿಗೆ 257 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈ ವರೆಗೆ ಮಾರಕ ವೈರಾಣು ದಾಳಿಯಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 1,60,949ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,18,46,652ಕ್ಕೆ ತಲುಪಿದೆ. 

ಮತ್ತೊಂದೆಡೆ ಸತತ 16ನೇ ದಿನವೂ ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,21,066ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

From Around the web