ಬೆಳ್ಳಂಬೆಳಗ್ಗೆ ಬೀದಿನಾಯಿಗಳ ದಾಳಿಗೆ ಜಿಂಕೆ ಬಲಿ

 
ಬೆಳ್ಳಂಬೆಳಗ್ಗೆ ಬೀದಿನಾಯಿಗಳ ದಾಳಿಗೆ ಜಿಂಕೆ ಬಲಿ

ಚಾಮರಾಜನಗರ: ಕಾಡಿನಿಂದ ನಾಡಿಗೆ ಬಂದ ಜಿಂಕೆಯೊಂದು ಬೀದಿ ನಾಯಿಗಳ ದಾಳಿಗೆ ಬಲಿಯಾಗಿರುವ ಘಟನೆ ಹನೂರು ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಜರುಗಿದೆ.

ಕಣ್ಣೂರು ಗ್ರಾಮದ ಮಠದ ಬೀದಿಯಲ್ಲಿ ಕಾಣಿಸಿಕೊಂಡ ಜಿಂಕೆಯನ್ನು ಬೀದಿನಾಯಿಗಳು  ಕಚ್ಚಿ ಗಾಯಗೊಳಿಸಿದ್ದು,ಗಂಭೀರವಾಗಿ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಈ  ಬಗ್ಗೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ವೃಷಭೇಂದ್ರಸ್ವಾಮಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿಸಿ, ಗ್ರಾಮಸ್ಥರು ಒಡಗೂಡಿ ಪೂಜೆ ಸಲ್ಲಿಸಿದ್ದಾರೆ.

From Around the web