ಕಾರಿನ ಗ್ಯಾರೇಜ್ ನಲ್ಲಿ ಬೆಂಕಿ ಅವಘಡ: ಬೆಂಕಿಗೆ ಆಹುತಿಯಾದ ಕಾರುಗಳು
Sat, 13 Mar 2021

ಆನೇಕಲ್: ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಲಕ್ಷ್ಮೀ ಚಿತ್ರಮಂದಿರದ ಸಮೀಪ ಇರುವಂತಹ ಕಾರಿನ ಗ್ಯಾರೇಜ್ ನಲ್ಲಿ ಆರಕ್ಕೂ ಹೆಚ್ಚು ಕಾರಗಳನ್ನು ನಿಲ್ಲಿಸಲಾಗಿತ್ತು. ಅದರಲ್ಲಿನ ಒಂದು ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಅಕ್ಕ ಪಕ್ಕದಲ್ಲಿನ ಕಾರುಗಳಿಗೂ ಬೆಂಕಿ ಆವರಿಸಿ ಧಗಧಗನೆ ಹೊತ್ತಿ ಉರಿಯಿತು. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಬಂದ ಎರಡು ಅಗ್ನಿಶಾಮಕ ದಳ ಸಿಬ್ಬಂದಿ ವಾಹನಗಳು ಒಂದು ಗಂಟೆಗಳ ಕಾಲ ಕಾರ್ಯಚರಣೆ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿ ಅವಘಡದಲ್ಲಿ ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಘಟನೆಗೆ ಹೆಚ್ಚು ಬಿಸಿಲಿನ ತಾಪ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗಿದೆ.