ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ

 
ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ

ಚಾಮರಾಜನಗರ: ಬ್ಯಾಂಕ್ ಸೇರಿದಂತೆ ಕೇಂದ್ರ ಸರ್ಕಾರ ಸೌಮ್ಯದ ವಿವಿಧ ಇಲಾಖೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಚಾಮರಾಜನಗರದಲ್ಲಿ ತಮಟೆ ಚಳವಳಿ ನಡೆಸಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ಸೇನಾಪಡೆ ಸಂಘಟನೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ತಮಟೆ ಬಡಿದು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರ ಬ್ಯಾಂಕ್ ಹಾಗೂ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುವ ಮೂಲಕ ಎಸ್ಸಿ,ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಅನ್ಯಾಯಮಾಡುತ್ತಿದೆ. ಅಲ್ಲದೆ ಬ್ಯಾಂಕ್ ಹಾಗೂ ರೈಲ್ವೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳನ್ನು ಖಾಸಗಿ ಕಂಪನಿಗಳಿಗೆ ನೀಡಿ ದೇಶವನ್ನು ಲೂಟಿ ಮಾಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಕೂಡಲೇ ಖಾಸಗೀಕರಣ ನೀತಿಯನ್ನು  ಕೈಬೀಡಬೇಕು. ತಪ್ಪಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

From Around the web