ಕೆಎಸ್ಆರ್ಟಿಸಿ ಬಸ್, ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

 
ಕೆಎಸ್ಆರ್ಟಿಸಿ ಬಸ್, ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಚಾಮರಾಜನಗರ: ಕೆಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಚೆನ್ನಲಿಂಗನಹಳ್ಳಿ ಗ್ರಾಮದ ಸಮೀಪ ಜರುಗಿದೆ.

ಹನೂರು ತಾಲೂಕಿನ ಅಣಗಳ್ಳಿ ದೊಡ್ಡಿ ಗ್ರಾಮದ ನಿವಾಸಿ ಪ್ರಕಾಶ್ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ಖಾಸಗಿ ಬ್ಯಾಂಕ್ ನ ಕೇಂದ್ರೀಯ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಇಂದು ಮಂಗಲ, ಚೆನ್ನಲಿಂಗನಹಳ್ಳಿ ಗ್ರಾಮದಲ್ಲಿನ ಕೇಂದ್ರೀಯ ಸಂಘದ ಸದಸ್ಯರಿಂದ ಹಣ ಪಡೆದು ಲೋಕನಹಳ್ಳಿ  ಗ್ರಾಮಕ್ಕೆ ತೆರಳುತ್ತಿದ್ದಾಗ ಒಡೆಯರಪಾಳ್ಯ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ  ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಸಂಬಂಧ ಹನೂರು  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಸ್ಥಳಕ್ಕೆ  ಪೊಲೀಸ್ ಠಾಣೆಯ ವೃತ್ತನಿರೀಕ್ಷಕ ಸಂತೋಷ ಕಶ್ಯಪ್, ಪೇದೆಗಳಾದ ರಾಘವೇಂದ್ರ, ಬಿಳಿಗೌಡ ರಾಮ್ ಶೆಟ್ಟಿ ಇತರರು ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

From Around the web