ಸಾಮೂಹಿಕ ಅತ್ಯಾಚಾರ: ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

 
ಸಾಮೂಹಿಕ ಅತ್ಯಾಚಾರ: ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಮೈಸೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆ ಮೈಸೂರು ನ್ಯಾಯಾಲಯ ಮೂವರು ಆರೋಪಿಗಳಿಗೆ  2 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಒಂದನೇ ಶೀಘ್ರಗತಿ ನ್ಯಾಯಾಲಯದಿಂದ ತೀರ್ಪು ಪ್ರಕಟಿಸಿದ್ದು, 20 ವರ್ಷ ಜೈಲು ಹಾಗೂ ತಲಾ 50 ಸಾವಿರ ದಂಡ ವಿಧಿಸಿದೆ‌.

ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ರವರಿಂದ ತೀರ್ಪು ಪ್ರಕಟವಾಗಿದ್ದು ನದೀಂ ಪಾಷಾ,ತನ್ವೀರ್ ಪಾಷಾ ಹಾಗೂ ಸದ್ದಾಂ ಹುಸೇನ್ ಶಿಕ್ಷೆಗೆ ಒಳಗಾದ ದೋಷಿಗಳಾಗಿದ್ದಾರೆ.

ಮೂವರು ಫೆ‌.14 , 2016 ರಂದು ಬಾಲಕಿಯನ್ನ ಡಾಬಾಗೆ ಕರೆದೊಯ್ದು ಜ್ಯೂಸ್ ಕುಡಿಸಿ ಗೋಬಿ ತಿನ್ನಿಸಿ ನಂತರ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ಮಾಡಿದ್ದರು ಎನ್ನಲಾಗಿದೆ. ಅತ್ಯಾಚಾರ ನಡೆಸಿದ ನಂತರ ಅಪ್ರಾಪ್ತೆಯ ಕುಟುಂಬವನ್ನೇ ಕೊಲೆ ಮಾಡುವ ಬೆದರಿಕೆ ಹಾಕಿದ್ದರು. ಸಂಬಂಧ ಸಂತ್ರಸ್ಥೆ ಪರ ಸರ್ಕಾರಿ ಅಭಿಯೋಜಕರಾದ ಮಂಜುಳಾ ವಾದ ಮಂಡಿಸಿದ್ದರು. ಸಂಬಂಧ ಉದಯಗಿರಿ ಪೊಲೀಸ್ ಠಾಣೆಯ ನಿರೀಕ್ಷಕರಾದ ಸಂತೋಷ್ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಿದ್ದರು.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ, ಕೊಲೆ ಬೆದರಿಕೆ ಪ್ರಕರಣ ದಾಖಲಿಸಲಾಗಿತ್ತು.

From Around the web