ಶಿವಸೇನೆ ಸಂಸದರ ಹೇಳಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

 
ಶಿವಸೇನೆ ಸಂಸದರ ಹೇಳಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

ಚಾಮರಾಜನಗರ : ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಸಂಸತ್ ನಲ್ಲಿ ಚರ್ಚಿಸುತ್ತಿರುವ ಶಿವಸೇನೆ ಸಂಸದರ ಕ್ರಮವನ್ನು ವಿರೋಧಿಸಿ ಇಂದು ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಚಾಮರಾಜನಗರದಲ್ಲಿ ಕಟ್ಟಿಗೆ ಹಿಡಿದು ಪ್ರತಿಭಟನೆ ನಡೆಸಿದರು.

ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಎದುರು ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಶಿವಸೇನೆ ಸಂಸದರು ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಬಳಿಕ ಅಲ್ಲಿಂದ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಶ್ರೀಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಕೆಲ ಕಾಲ ಹೆದ್ದಾರಿ ಸಂಚಾರ ತಡೆ ನಡೆಸಿದರು.

ಸಂಸತ್ತಿನಲ್ಲಿ ಶಿವಸೇನೆಯ ಸಂಸದರು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಚರ್ಚಿಸಿ ಕನ್ನಡಿಗರನ್ನು ಕೆಣಕಿದ್ದಾರೆ. ಶಿವಸೇನೆ ಮತ್ತು ಮಹಾರಾಷ್ಟ್ರ ಸರ್ಕಾರ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಪದೇ ಪದೇ ಬೆಳಗಾವಿ ನಮಗೆ ಸೇರಬೇಕೆಂದು ಖ್ಯಾತೆ ತೆಗೆಯುತ್ತಿದ್ದಾರೆ. ಬೆಳಗಾವಿ ಕರ್ನಾಟಕಕ್ಕೆ ಸೇರಿದ ಬಾಗವಾಗಿದೆ. ಶಿವಸೇನೆ ಸಂಸದರು ಇದನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕನ್ನಡಿಗರು ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಮರಾಠರಿಗಾಗಿ ನಿಗಮವನ್ನು ಸ್ಥಾಪನೆ ಮಾಡಿದ್ದಾರು ಏಕೆ. ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರ ಮಹಾರಾಷ್ಟ್ರ ಸರ್ಕಾರದ ವಿರುದ್ದ ಸಮರವನ್ನು ಸಾರಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಶಿವಸೇನೆ ಸಂಸದರಿಗೆ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಆಗ್ರಹಿಸಿದರು.

From Around the web