ಸದ್ಯಕ್ಕೆ ಯಾವುದೇ ಲಾಕ್ಡೌನ್ ಇಲ್ಲ: ಬಿ‌.ಸಿ.ಪಾಟೀಲ್

 
ಸದ್ಯಕ್ಕೆ ಯಾವುದೇ ಲಾಕ್ಡೌನ್ ಇಲ್ಲ: ಬಿ‌.ಸಿ.ಪಾಟೀಲ್

ಬೆಂಗಳೂರು: ಯಾವುದೇ ಕಾರಣಕ್ಕೂ  ಸದ್ಯಕಗಕೆ ಲಾಕ್ಡೌನ್ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ‌.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಪ್ರಸಕ್ತ ಆರ್ಥಿಕ  ಪರಿಸ್ಥಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ.ಕಳೆದ ವರ್ಷಕ್ಕೂ ಈ ವರ್ಷಕ್ಕು ಪರಿಸ್ಥಿತಿ ಬೇರೆ ಇದೆ.ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ. ಜನರೂ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕೆಂದರು‌.

ಕೋರ್ಟ್ ಗೆ ಹೋಗೋದು ನನ್ನ ಹಕ್ಕಾಗಿದ್ದು, ಅದನ್ನು ಪ್ರಶ್ನಿಸಲು ಕಾಂಗ್ರೆಸ್ ನವರಿಗೆ ಯಾವುದೇ ಹಕ್ಕಿಲ್ಲ. ಕಾಂಗ್ರೆಸ್ ನಾಯಕರು ನೀತಿ ಸಿದ್ದಾಂತದ ಮೇಲೆ ಹೊರಾಟ ಮಾಡಬೇಕು.ಅವರಿಗೆ ಹೋರಾಟ ಮಾಡಲು ಯಾವುದೇ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ ಮೈತ್ರಿ ಸರ್ಕಾರ ಪತನಗೊಂಡ ಕಾರಣಕ್ಕೆ ನಮ್ಮ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆಂದು ಬಿ.ಸಿ.ಪಾಟೀಲ್  ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳಾದ್ದರಿಂದ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೇಂದ್ರದ ನಡೆಯನ್ನು ಬಿ.ಸಿ.ಪಾಟೀಲ್ ಸಮರ್ಥಿಸಿಕೊಂಡರು.

From Around the web