ಸಿಡಿ ಪ್ರಕರಣ: ಯುವತಿ ಐದು ವರ್ಷದಿಂದ ಪ್ರೀತಿಸುತ್ತಿದ್ದಳು..!

 
ಸಿಡಿ ಪ್ರಕರಣ: ಯುವತಿ ಐದು ವರ್ಷದಿಂದ ಪ್ರೀತಿಸುತ್ತಿದ್ದಳು..!

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ  ಸಂಬಂಧ ಯುವತಿ ಹಾಗೂ ಮಾಜಿ ಪತ್ರಕರ್ತರನ್ನು ಎಸ್ಐಟಿ ತಂಡ ವಿಚಾರಣೆ ನಡೆಸುತ್ತಿದೆ. ಈ ವೇಳೆ, ಯುವತಿ ಮದುವೆಗೆ ಸಿದ್ಧವಾಗಿದ್ದಳು ಎಂಬ ಮಾಹಿತಿ ಹೊರ ಬಿದ್ದಿದೆ.

ಉತ್ತರ ಕರ್ನಾಟಕ ಮೂಲದ ಸಂತ್ರಸ್ತೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದಳು. ಯುವತಿಗೆ ಐದು ವರ್ಷಗಳಿಂದ ಯುವಕನೊಬ್ಬನ ಪರಿಚಯವಿದ್ದು, ಪ್ರೀತಿಸಿ ಮೂರು ತಿಂಗಳ ಹಿಂದೆ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಯುವಕ ತನ್ನ ಮನೆಯಲ್ಲೂ ಪ್ರೀತಿಯ ವಿಚಾರ ತಿಳಿಸಿ, ವಿವಾಹಕ್ಕೆ ಮನೆಯವರನ್ನು ಒಪ್ಪಿಸಿದ್ದ. ಸಂತ್ರಸ್ತೆಯನ್ನು ಮನೆಗೆ ಕರೆದೊಯ್ದು ಪರಿಚಯಿಸಿದ್ದ. ಹೀಗಾಗಿ ಆಕೆ ಯುವಕನ ಮನೆಯವರ ಜತೆಗೂ ಸಂಪರ್ಕದಲ್ಲಿದ್ದಳು  ಎಂಬ ಮಾಹಿತಿ ತಿಳಿದು ಬಂದಿದೆ. ಅಲ್ಲದೇ, ಆಕೆಯ ಪ್ರಿಯಕರನನ್ನು ಎಸ್ಐಟಿ ವಶಕ್ಕೆ ಪಡೆಯಲಾಗಿದೆ.

ಕೆಲ ದಿನಗಳಿಂದ ಹೈದರಾಬಾದ್‌ನ ಪರಿಚಯಸ್ಥರ ಮನೆಯಲ್ಲಿ ವಾಸವಿದ್ದ ಯುವತಿ ಶನಿವಾರ ವೀಡಿಯೋ ಬಿಡುಗಡೆ ಮಾಡಿದ್ದಳು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಎಸ್‌ಐಟಿ ಅಧಿಕಾರಿಗಳು  ಮಹಿಳಾ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

From Around the web