ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಸಚಿವ ಸುಧಾಕರ್

 
ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಸಚಿವ ಸುಧಾಕರ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದಂತೆ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾನ್ಯ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ರವರು ಇಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಕ್ರಮೇಣ ಹೆಚ್ಚಾಗುತ್ತಿದ್ದು, ನಿನ್ನೆ ಸುಮಾರು 1,400 ಪ್ರಕ್ರಣಗಳು ಕಂಡುಬಂದಿದೆ. ಕಳೆದ ನಾಲ್ಕು ತಿಂಗಳಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕಣಗಳು ಕಂಡುಬಂದಿದ್ದು, ಈ ಪೈಕಿ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೋವಿಡ್ ಉಲ್ಬಣವಾಗುವುದನ್ನು ನಿಯಂತ್ರಿಸಲು ಪಾಲಿಕೆ ಕ್ರಮವಹಿಸುತ್ತಿದೆಯೆಂದು ಆರೋಗ್ಯ ಸಚಿವರು ಡಾ. ಕೆ.ಸುಧಾಕರ್ ತಿಳಿಸಿದರು.

ಸಭೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ. 60ಕ್ಕೂ ಹೆಚ್ಚು ಹೊರರಾಜ್ಯಗಳಿಂದ ನಗರಕ್ಕೆ ಬರುತ್ತಿರುವವರಿಂದಲೇ ಕೋವಿಡ್ ಪ್ರಕರಣಗಳು ದೃಢಪಡುತ್ತಿರುವುದು ಕಂಡಬಂದಿದೆ. ಈ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬಂದು ಇಲ್ಲಿಯೇ ವಾಸಿಸುವ/ಉಳಿದುಕೊಳ್ಳುವ ಎಲ್ಲರೂ ಏಪ್ರಿಲ್ 1 ರಿಂದ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ವರದಿ ನೆಗೆಟಿವ್ ಪ್ರತಿ ತರುವುದು ಜಾರಿಯಾಗಲಿದೆ ಎಂದು ಹೇಳಿದರು.

ನಗರದ ಅಪಾರ್ಟ್ಮೆಂಟ್ಸ್ ಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿವೆ. ಅಲ್ಲದೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟರೆ ಕುಟುಂಬದ ಉಳಿದೆಲ್ಲಾ ಸದಸ್ಯರಿಗೂ ಕೋವಿಡ್ ಸೋಂಕು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ನಾಗರಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಎಚ್ಚರಿಕೆಯಿಂದಿರಬೇಕು. ನಗರದ ಮಾರುಕಟ್ಟೆ, ಚಿತ್ರಮಂದಿರ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮದುವೆ ಮಂಟಪ, ಧಾರ್ಮಿಕ ಸ್ಥಳ, ಶಾಲಾ-ಕಾಲೇಜು ಆವರಣ, ವಿವಿಧ ಸ್ಥಳ ಸೇರಿದಂತೆ ಹೆಚ್ಚು ಜನಸಂದಣಿ ಸೇರುವಕಡೆ ಮಾರ್ಷಲ್‌ಗಳು ಹೋಗಿ ಸಾಮಾಜಿಕ ಅಂತಹ, ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸಲಿದ್ದಾರೆ. ಇದರ ಜೊತೆಗೆ ನಗರದಲ್ಲಿ ಯಾವುದಾದರು ಕಾರ್ಯಕ್ರಮ/ಸಮಾರಂಭಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡದಿರುವುದು ಕಂಡುಬಂದರೆ ಸಂಬಂಧಪಟ್ಟ ಮಾಲೀಕರ ಜೊತೆಗೆ ಆಯೋಜಕರನ್ನು ಕೂಡಾ ಹೊಣೆಗಾರರನ್ನಾಗಿಸಿ, ಆಯೋಜಕರಿಗೂ ದಂಡ ವಿಧಿಸಲಾಗುವುದು. ಯಾವುದೇ ಕಾರ್ಯಕ್ರಮ/ಸಮಾರಂಭಗಳಾಗಲಿ ಕಡ್ಡಾಯವಾಗಿ ತೆರೆದ ಸಭಾಂಗಣದಲ್ಲಿ 500 ಮಂದಿ ಹಾಗೂ ಮುಚ್ಚಿದ ಸಭಾಂಗಣಗದಲ್ಲಿ 200 ಮಂದಿ ಮಾತ್ರವಿರಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದರು.

From Around the web