ಹೆಚ್ಚಾಯ್ತು ಕೊರೊನಾ ಕೇಸ್: ಜನ ಮರೆತರು ಕೋವಿಡ್ ರೂಲ್ಸ್

 
ಹೆಚ್ಚಾಯ್ತು ಕೊರೊನಾ ಕೇಸ್: ಜನ ಮರೆತರು ಕೋವಿಡ್ ರೂಲ್ಸ್

ದೇಶದಲ್ಲಿ ಕೋವಿಡ್  19 ಎರಡನೇ ಅಲೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೋನಾ ಮಹಾಮಾರಿ ಅಬ್ಬರ ಮತ್ತೆ ಜೋರಾಗಿದೆ. ನಿನ್ನೆ ಒಂದೇ ದಿನದಲ್ಲಿ 25,833 ಪ್ರಕರಣಗಳು ದಾಖಲಾಗಿವೆ.

ಹೀಗಿದ್ದರೂ ಜನ ಮಾತ್ರ ಕೋವಿಡ್ ರೂಲ್ಸ್ ಗಳನ್ನು ಗಾಳಿಗೆ ತೂರಲಾಗಿದೆ. ಕೊರೊನಾ ಭೀತಿಯನ್ನು ಮರೆತು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಸುತ್ತಾಡುತ್ತಿದ್ದಾರೆ. ಆದರೆ, ಕೊರೋನಾ ಎರಡನೇ ಅಲೆ ಜೋರಾಗಿದ್ದು, ಜನರು ಕೋವಿಡ್ ಮುಂಜಾಗ್ರತೆ ವಹಿಸಬೇಕಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣ ಪ್ರಾರಂಭವಾದಾಗಿನಿಂದಲೂ ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣ ಇದಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,96,340ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿನಿಂದ 58 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 53,138ಕ್ಕೆ ಏರಿಕೆಯಾಗಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಒಂದೇ ದಿನ 24,896 ಪ್ರಕರಣಗಳು ವರದಿಯಾಗಿದ್ದವು. ಬಳಿಕ ಪ್ರಕರಣ ಇಳಿ ಮುಖವಾಗಿತ್ತು. ಈಗ ಮತ್ತೆ ಮಹಾರಾಷ್ಟ್ರದಲ್ಲಿ ಏರಿಕೆಯಾಗುತ್ತಿದ್ದು, ಕೊರೋನಾ ವೈರಸ್ ಪ್ರಕರಣಗಳು ಕಳೆದ ಕೆಲವು ವಾರಗಳಲ್ಲಿ ತೀವ್ರಗತಿಯಲ್ಲಿ ಏರಿಕೆ ಕಂಡಿವೆ. ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದ್ವಿಗುಣಗೊಳ್ಳುತ್ತಿವೆ.

ಇನ್ನು ಕರ್ನಾಟಕದಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೇ ದಿನದಲ್ಲಿ 1,488 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಿನಲ್ಲಿ 925 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಂದೇ ದಿನದಲ್ಲಿ 39, 670 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರಿಗೆ, ವೈರಸ್ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಒಟ್ಟು ಪರೀಕ್ಷೆಗಳಲ್ಲಿ ಶೇಕಡ 70ರಷ್ಟು ಆರ್‌ಟಿಪಿಸಿಆರ್ ಪರೀಕ್ಷೆ ನಡೆಸುವಂತೆ ಸೂಚಿಸಿದ್ದಾರೆ.

From Around the web