ಡಿಕೆಶಿ ಬಂಧನಕ್ಕೆ ಆಗ್ರಹಿಸಿ ನಾಯಕ ಸಮುದಾಯದಿಂದ ಪ್ರತಿಕೃತಿ ದಹಿಸಿ ಪ್ರತಿಭಟನೆ

 
ಡಿಕೆಶಿ ಬಂಧನಕ್ಕೆ ಆಗ್ರಹಿಸಿ ನಾಯಕ ಸಮುದಾಯದಿಂದ ಪ್ರತಿಕೃತಿ ದಹಿಸಿ ಪ್ರತಿಭಟನೆ

ಚಾಮರಾಜನಗರ: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ನಾಯಕ ಸಮುದಾಯದ ಮುಖಂಡರು ಡಿಕೆಶಿ ಪ್ರತಿಕೃತಿ ದಹಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಜಮಾಯಿಸಿದ ನಾಯಕ ಸಮುದಾಯದ ಮುಖಂಡರು ಕೆಲ ಕಾಲ ರಸ್ತೆ ಸಂಚಾರ ತಡೆ ನಡೆಸಿ ಡಿಕೆ ಶಿವಕುಮಾರ್ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ, ಡಿಕೆಶಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣ ಕರ್ತರಾದ ರಮೇಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿ ಪರಿಶಿಷ್ಟ ಪಂಗಡದ ಯುವತಿಯನ್ನು  ಬಳಸಿಕೊಂಡಿದ್ದಾರೆ. ಸಂತ್ರಸ್ತ ಯುವತಿಯೇ ಡಿಕೆಶಿ ಅವರೇ ಸಿಡಿ ವಿಚಾರಕ್ಕೆ ಕಾರಣ ಎಂದು ಹೇಳುತ್ತಿದ್ದಾಳೆ. ಹೀಗಾಗಿ ಸರ್ಕಾರ ಕೂಡಲೇ ಡಿಕೆಶಿ ಅವರನ್ನು ಬಂಧಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಾಯಕ ಸಮುದಾಯದಿಂದ ನಿರಂತರವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

From Around the web