ವರ್ತೂರು ಪ್ರಕಾಶ್ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಾರಂತೆ

 

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಮಾನಸಿಕ ಅಸ್ವಸ್ಥತೆಗೆ ಗುರಿಯಾಗಿದ್ದು ಈಗಾಗೀ ಮಾಜಿ ಸಂಸದ ಕೆಎಚ್ ಮುನಿಯಪ್ಪ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೋಲಾರ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್ ಲೇವಡಿ ಮಾಡಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಕೆಎಚ್ ಮುನಿಯಪ್ಪ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಹೇಳಿಕೆಗಳನ್ನು ನೀಡುತ್ತಿರುವ ವರ್ತೂರು ಪ್ರಕಾಶ್ ವಿರುದ್ಧ ವಾಗ್ದಾಳಿ ನಡೆಸಿದರು. ವರ್ತೂರು ಪ್ರಕಾಶ್ ಯಾವ ಪಕ್ಷಕ್ಕೂ ಸಲ್ಲವುದಿಲ್ಲ ಕೇವಲ ಮಾತಿನ ಮೂಲಕ ತಮ್ಮ ನಾಲಿಗೆ ಹರಿಬಿಟ್ಟು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಾರೆ. ನಮ್ಮ ಪಕ್ಷದ ನಾಯಕರ ಬಗ್ಗೆ ಮಾತನಾಡಲು ವರ್ತೂರು ಪ್ರಕಾಶ್ ಯಾರೂ, ಆತ ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ಅವರೇ ಒಂದು ಸ್ವಂತ ಪಕ್ಷ ಕಟ್ಟಿಕೊಂಡು ಓಡಾಡುತ್ತಿದ್ದಾರೆ.  ಕೇವಲ ಸುಳ್ಳು ಹೇಳಿಕೊಂಡ ರಾಜಕೀಯ ಮಾಡುವುದನ್ನು ವರ್ತೂರು ಪ್ರಕಾಶ್ ಮೊದಲು ಬೀಡಬೇಕು.  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭಾ ವಿರೋಧ ಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ  ವರ್ತೂರು ಪ್ರಕಾಶ್ ಅವರನ್ನು ಕಾಂಗ್ರೆಸ್ ಸೇರಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಕೆಎಚ್ ಮುನಿಯಪ್ಪ ವರ್ತೂರು ಪ್ರಕಾಶ್ ನಡೆ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಇಂತಹವರು ಅಗತ್ಯವಿಲ್ಲ ಎಂದಿದ್ದಾರೆ. ಹೀಗಾಗಿ ಕೆಎಚ್ ಮುನಿಯಪ್ಪ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ವರ್ತೂರು ಪ್ರಕಾಶ್ ಅವರನ್ನು ಕಾಂಗ್ರೆಸ್ ಸೇರಿಸಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಅರಿತು ವರ್ತೂರು ಪ್ರಕಾಶ್ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಮಾತನಾಡುವುದು ಬೀಡಬೇಕು ಎಂದು ಎಚ್ಚರಿಕೆ ನೀಡಿದ್ರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳು, ಮುಖಂಡರು ಹಾಜರಿದ್ದರು.

From Around the web